ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಏಪ್ರಿಲ್ 18, 19ರಂದು ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆ ಸುರಿಯುವ ಮುನ್ಸೂಚನೆ ನಂತರ ಈ ಎರಡು ದಿನ ಬಹುತೇಕ ಎಲ್ಲ ಜಿಲ್ಲೆಗಳಿಗೂ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಪ್ರತಿ ಗಾಳಿಯ ವೇಗವು ಗಂಟೆಗೆ 30-40 ಕಿಲೋ ಮೀಟರ್‌ ಬೀಸುವ ಸಾಧ್ಯತೆಯಿದೆ ಎಂದು ಹೇಳಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಏಪ್ರಿಲ್ 18ರಿಂದ ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಏಪ್ರಿಲ್ 18ರಿಂದ ಐದು ದಿನಗಳ ಕಾಲ ಮಳೆಯಾಗಲಿದೆ. ಈ ಭಾಗದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮ ಮಳೆ ಸುರಿಯುವ ಸಾಧ್ಯತೆಯಿದೆ ಏಪ್ರಿಲ್ 18, 19ರಂದು ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ,ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಅದೇರೀತಿ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲೂ ಮಳೆಯಾಗಲಿದೆ.
ಉತ್ತರ ಒಳನಾಡು ಹಾಗೂ ಮಲೆನಾಡುವ ಭಾಗದ ಹಲವು ಭಾಗಗಲ್ಲಿ ಬುಧವಾರ (ಏಪ್ರಿಲ್‌ 17) ಮಳೆರಾಯ ತಂಪೆರೆಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.