ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಲ್ಲಿ ವಿಪರೀತ ಮಳೆ ಮುಂದುವರಿಯಲಿದ್ದು, ಗುರುವಾರ (ಜುಲೈ 18) ಕರಾವಳಿಯ ಮೂರು ಜಿಲ್ಲೆಗಳು ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 18ರಂದು ರೆಡ್ ಅಲರ್ಟ್ ನೀಡಲಾಗಿದೆ. ಅದೇರೀತಿ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಜುಲೈ 18ರಂದು ರೆಡ್ ಅಲರ್ಟ್ ನೀಡಲಾಗಿದೆ. ಹಾಸನ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮುಂದಿನ ಎರಡು ದಿನಗಳು ಕೂಡ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಈಗಾಗಲೇ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಗೆ ಹಲವಾರು ಅವಾಂತರ ಸೃಷ್ಟಿಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭೂಕುಸಿತವಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ.