ಮುಂಬೈ: ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಮುಂಬೈ ಮತ್ತು ಅದರ ನೆರೆಯ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
“ಮುಂಬೈನಲ್ಲಿ ಭಾರೀ ಮಳೆಯಾಗಲಿದೆ” ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಿದೆ ಎಂದು ಮಹಾನಗರ ಪಾಲಿಕೆ ಅಧಿಕಾರಿ ತಿಳಿಸಿದ್ದಾರೆ. ಮುಂಬೈ, ಥಾಣೆ, ರಾಯಗಡ ಮತ್ತು ರತ್ನಗಿರಿ ಜಿಲ್ಲೆಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ (IMD) ಮುನ್ಸೂಚನೆ ನೀಡಿದೆ.ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಗುರುವಾರ ಮುಂಬೈನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಬುಧವಾರ ಪ್ರಕಟಿಸಿದೆ.
ಮುಂಬೈನ ಹಲವು ಕಡೆ ಬುಧವಾರ ಮಧ್ಯಾಹ್ನದಿಂದ ಭಾರಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದೆ. ಮಳೆಯಿಂದ ಭಾರೀ ಸಂಚಾರ ದಟ್ಟಣೆ ಉಂಟಾಗಿದ್ದು, ಸ್ಥಳೀಯ ರೈಲು ಸಂಚಾರ ವಿಳಂಬವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹವಾಮಾನ ಇಲಾಖೆಯು ಸೆಪ್ಟೆಂಬರ್ 26 ರಂದು ಪಾಲ್ಘರ್ಗೆ ರೆಡ್ ಅಲರ್ಟ್ ಹಾಗೂ ಥಾಣೆ, ರಾಯಗಡ, ಮುಂಬೈ ಮತ್ತು ಪುಣೆಗೆ ಅರೆಂಜ್ ಅಲರ್ಟ್ ಘೋಷಿಸಿದೆ.5.30ಕ್ಕೆ ಹೊಸ ಪ್ರಕಟಣೆ ಹೊರಡಿಸಿದೆ. ಗುರುವಾರ ಬೆಳಿಗ್ಗೆ 8.30ರವರೆಗೂ ರೆಡ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಮಳೆಯಿಂದಾಗಿ ಮುಂಬೈಗೆ ಬರಬೇಕಿದ್ದ ಕೆಲ ವಿಮಾನಗಳ ಮಾರ್ಗಗಳನ್ನು ಬದಲಿಸಲಾಗಿದೆ. ರಸ್ತೆಗಳಲ್ಲೂ ಸಂಚಾರ ದಟ್ಟಣೆ ಹೆಚ್ಚಾಗಿದೆ. ಮುಂಬೈ ಲೋಕಲ್ ರೈಲುಗಳ ವೇಳಾಪಟ್ಟಿಯೂ ಬದಲಾಗಿದೆ ಎಂದು ವರದಿಯಾಗಿದೆ.
ಮುಂಬೈ ಮಾತ್ರವಲ್ಲದೇ, ಸುತ್ತಮುತ್ತಲಿನ ಪ್ರದೇಶಗಳಲ್ಲೂ ಬುಧವಾರ ಮಧ್ಯಾಹ್ನದಿಂದ ಸತತವಾಗಿ ಮಳೆ ಸುರಿಯುತ್ತಿದೆ. ಇದರಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಬಿರುಗಾಳಿ, ಹಾಗೂ ಸಿಡಿಲು ಸಹಿತ ಮಳೆಯಾಗುತ್ತಿದೆ. ಠಾಣೆ, ರಾಯಗಡ ಹಾಗೂ ರತ್ನಗಿರಿ ಪ್ರದೇಶಗಳಲ್ಲೂ ಭಾರೀ ಮಳೆಯಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
‘ಚಂಡಮಾರುತದ ಪರಿಚಲನೆಯು ಉತ್ತರ ಕೊಂಕಣ ಭಾಗದಿಂದ ಬಾಂಗ್ಲಾದೇಶದ ದಕ್ಷಿಣ ಭಾಗದತ್ತ ಸಾಗುತ್ತಿದ್ದು, ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೊಂಕಣದ ಪೂರ್ಣ ಭಾಗ ಹಾಗೂ ಗೋವಾವನ್ನು ಈ ವಾರದೊಳಗೆ ಆವರಿಸಿಕೊಳ್ಳಲಿದೆ. ದಕ್ಷಿಣದತ್ತ ಮುಂದೆ ಸಾಗಲಿದೆ’ ಎಂದು ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿ ಸುಷ್ಮಾ ನಾಯರ್ ತಿಳಿಸಿದ್ದಾರೆ.