ಉಡುಪಿ/ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9ರಂದು ಉತ್ತಮ ಮಳೆ ಸುರಿಯುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನ್ನು ಹವಾಮಾನ ಇಲಾಖೆ ನೀಡಿದೆ. ಕಳೆದ ಕೆಲ ದಿನಗಳಿಂದ ಉಭಯ ಜಿಲ್ಲೆಗಳಲ್ಲಿ ಜೋರಾಗಿ ಮಳೆ ಸುರಿಯುತ್ತಿದೆ, ಭತ್ತ ನಾಟಿ ಕಾರ್ಯ ಚುರುಕಾಗಿ ಸಾಗಿದೆ. ನದಿಗಳು ತುಂಬಿ ಹರಿಯುತ್ತಿವೆ. ಭಾರೀ ಮಳೆ ಹಿನ್ನೆಲೆಯಲ್ಲಿ ಇಂದು ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಕಾಲೇಜುಗಳಿಗೆ ಸೋಮವಾರ (ಜೂನ್ 8ರಂದು) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.