ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಉಡುಪಿ, ಉತ್ತರಕನ್ನಡ, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗುವ ಸಾಧ್ಯತೆ ಇರುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಹಳದಿ ಅಲರ್ಟ್ ಘೋಷಣೆ ಮಾಡಿದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿ ವೇಗ ಗಂಟೆಗೆ ಸುಮಾರು 55 km ವರೆಗೆ ಹೋಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ರವಾನಿಸಲಾಗಿದೆ. ಬೆಂಗಳೂರು ನಗರ ಸುತ್ತಮುತ್ತಲು ಸ್ಥಳೀಯ ಮುನ್ಸೂಚನೆ ಗಮನಿಸಿದರೆ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯ ಮೋಡಕವಿದ ಆಕಾಶ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಸಿನೋಪ್ಟಿಕ್ ಹವಾಮಾನದ ಶಾಸ್ತ್ರದ ವೈಶಿಷ್ಟ್ಯ ಗಮನಿಸಿದಾಗ ಸುಳಿಗಾಳಿಯ ಪರಿಚಲನೆ ಈಗ ಉತ್ತರ ಮಧ್ಯ ಮಹಾರಾಷ್ಟ್ರ ಮತ್ತು ನೆರೆಹೊರೆಯಲ್ಲಿದ್ದು ಸಮುದ್ರ ಮಟ್ಟದಿಂದ 5. 8 ಕಿ ಮೀ ವರೆಗೆ ಎತ್ತರದೊಂದಿಗೆ ದಕ್ಷಿಣಕ್ಕೆ ವಾಲುತ್ತದೆ. ಉತ್ತರ ಮಧ್ಯ ಮಹಾರಾಷ್ಟ್ರ ಮತ್ತು ನೆರೆಹೊರೆಯ ಸುಳಿಗಾಳಿಯ ಪರಿಚಲನೆಯಿಂದ ಉತ್ತರ ಬಾಂಗ್ಲಾದೇಶದವರೆಗೆ ವಿದರ್ಭ, ಛತ್ತೀಸ ಗಢ, ಜಾರ್ಖಂಡ್, ಗಂಗಾ ನದಿ ಪಶ್ಚಿಮ ಬಂಗಾಳದ ಮೂಲಕ ಒಂದು ಟ್ರಫ್ ಸಾಗುತ್ತದೆ.