ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 18 ರಿಂದ 21ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 19 ಮತ್ತು 20ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಆರೆಂಜ್ ಅಲರ್ಟ್ ಇರುವ ದಿನಗಳಲ್ಲಿ ಮಿಂಚು, ಗುಡುಗು ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 6.45 ಸೆಂ.ಮೀ.ಯಿಂದ 11.55 ಸೆಂ.ಮೀ.ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಮೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಎರಡು ದಿನಗಳಲ್ಲಿ ಗುಡುಗು ಸಿಡಿಲುಗಳಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.