ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದ್ದು, ಹಲವೆಡೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶನಿವಾರ (ಜುಲೈ 6) ಜಿಲ್ಲೆಯ ಕರಾವಳಿ ಭಾಗದ ಐದು ತಾಲೂಕಿನ ಶಾಲೆ- ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಎಲ್ಲ ಪ್ರಾಥಮಿಕ, ಫ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 6ರಂದು ರಜೆ ನೀಡಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ.