- ಹೆಬ್ರಿ : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ, ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರ ಇಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾಟದಲ್ಲಿ, ಬಾಲಕಿಯರ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪ್ರಾಪ್ತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ಎಳ್ಳಾರೆಯ ಪ್ರಭಾಕರ ಶೆಟ್ಟಿ ಮತ್ತು ಸುಜಾತ ಶೆಟ್ಟಿ ದಂಪತಿಯ ಪುತ್ರಿ . ಇವಳ ಸಾಧನೆಗೆ ಆಡಳಿತ ಮಂಡಳಿ ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೀಯ ವೃಂದ ಅಭಿನಂದಿಸಿದೆ.