
ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇಲ್ಲಿನ ಕನ್ನಡ ಉಪನ್ಯಾಸಕ ರವಿಚಂದ್ರ ಬಾಯರಿಯವರು ನಮ್ಮ ಭಾರತೀಯ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡಿದರು.
ಮೈತುಂಬ ಬಟ್ಟೆ ಧರಿಸುವುದು ನಮ್ಮ ಸಂಸ್ಕೃತಿ , ಗಂಡಿನ ಹಣೆಯಲ್ಲಿ ತಿಲಕ ಹೆಣ್ಣಿನ ಹಣೆಯಲ್ಲಿ ಕುಂಕುಮ. ಕೈಯಲ್ಲಿ ಬೆಳೆಯು ನಮ್ಮ ಸಂಸ್ಕೃತಿಯ ಬಳುವಳಿ. ಮನೆಯ ಮುಂದೆ ರಂಗೋಲಿ ಹಾಕುವುದು, ಹೊಸ್ತಿಲ ಪೂಜೆ, ಅಶ್ವತ್ಥ ಪೂಜೆ ಇತ್ಯಾದಿಗಳು ನಮ್ಮಲ್ಲಿ ಸಕಾರಾತ್ಮಕ ಭಾವನೆಗಳನ್ನು ಹುಟ್ಟು ಹಾಕುತ್ತದೆ. ಪುಸ್ತಕ ಓದುವ ಹವ್ಯಾಸ ಮತ್ತು ಅರಿವಿನ ಮಾತನ್ನು ಕೇಳಿಸಿಕೊಳ್ಳುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಜೋಗಿ ಅವರು ಸ್ಮರಣಿಕೆ ನೀಡಿ ಗೌರವಿಸಿದರು. ಅಮೃತ ಭಾರತಿ ಟ್ರಸ್ಟ್ ನ ಸದಸ್ಯ ವಿಷ್ಣುಮೂರ್ತಿ ನಾಯಕ್ ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಸಂಖ್ಯಾಶಾಸ್ತ್ರ ಉಪನ್ಯಾಸಕ ಚಂದ್ರಹಾಸ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.