
ಹೆಬ್ರಿ : ಇಲ್ಲಿನ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಿ , ಅವರ ಮುಖಾಂತರ ಗಿಡಗಳನ್ನು ನೆಟ್ಟು ನೀರನ್ನು ಪೋಷಿಸಲಾಯಿತು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರಾಜೇಶ್ ನಾಯಕ್ , ಪ್ರಾಂಶುಪಾಲ ಪ್ರಕಾಶ್ ಜೋಗಿ , ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ , ಕ್ಯಾಂಪಸ್ ಮೇಲ್ವಿಚಾರಕ ರಾಘವೇಂದ್ರ ಉಪನ್ಯಾಸಕರು ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜು ಮೈದಾನದ ಸುತ್ತ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು. ಅಮೃತ ಭಾರತಿ ಇಕೋ ಕ್ಲಬ್ ವತಿಯಿಂದ ಕಾರ್ಯಕ್ರಮವನ್ನು ಸಂಘಟಿಸಲಾಯಿತು.