
ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಹೆಬ್ರಿ ಇಲ್ಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಕ್ರಮ ಅಂಗವಾಗಿ ಇಂದು ಆಂಗ್ಲಭಾಷೆ ಶಿಕ್ಷಕ ಅಶೋಕ್ ತೆಕ್ಕಟ್ಟೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸ್ಮರಣ ಶಕ್ತಿ ವಿಷಯವಾಗಿ ಮಾತನಾಡಿದರು.
ಪ್ರತಿಯೊಬ್ಬ ವ್ಯಕ್ತಿ ಕೂಡ ಅದ್ಭುತವಾದ ಮೆದುಳನ್ನು ಹೊಂದಿರುತ್ತಾನೆ. ಅದನ್ನು ನಾವು ಹೇಗೆ ಬಳಸಿಕೊಳ್ಳುತ್ತೇವೆ ಎನ್ನುವುದರ ಮೇಲೆ ಅದರ ಸಾಮರ್ಥ್ಯ ಹೊರಹೊಮ್ಮುತ್ತದೆ. ಪಂಚೇಂದ್ರಿಯಗಳಿಂದ ವಿಷಯಗಳನ್ನು ಗ್ರಹಿಸುವ ನಾವು ಅದು ಸದಾ ನೆನಪಿನಲ್ಲಿ ಉಳಿಯಬೇಕಾದರೆ ಮತ್ತೆ ಮತ್ತೆ ಪುನರ್ ಮನನ ಮಾಡಬೇಕು. ಕೇಳಿಸಿಕೊಳ್ಳುವುದು ಮತ್ತು ಕಲಿಕೆಯ ನಡುವೆ ವ್ಯತ್ಯಾಸ ಇದೆ. ವಿದ್ಯಾರ್ಥಿ ಗಳು ಸದಾ ಅಧ್ಯಯನಶೀಲರಾಗಿರಬೇಕು ಎಂದರು.
ಅಮೃತ ಭಾರತಿ ಟ್ರಸ್ಟ್ ನ ಸದಸ್ಯ ವಿಷ್ಣುಮೂರ್ತಿ ನಾಯಕ್ , ಪ್ರಾಂಶುಪಾಲ ಪ್ರಕಾಶ್ ಜೋಗಿ, ಉಪನ್ಯಾಸಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಾರ್ವಜನಿಕ ಸಂಪರ್ಕಾಧಿಕಾರಿ ವಿಜಯ್ ಕುಮಾರ್ ಶೆಟ್ಟಿ ಸ್ಮರಣಿಕೆ ನೀಡಿ ಗೌರವಿಸಿದರು. ಅಂಗ್ಲ ಭಾಷಾ ಉಪನ್ಯಾಸಕಿ ಚಂದ್ರಕಲಾ ನಿರೂಪಿಸಿ, ವಂದಿಸಿದರು.