ಹೆಬ್ರಿ :ಅಮೃತ ಭಾರತಿ ವಿದ್ಯಾ ಕೇಂದ್ರ ಸಿಬಿಎಸ್ ಸಿ 10 ನೇ ತರಗತಿಯ ವಿದ್ಯಾರ್ಥಿ ಶ್ರೀರಾಮ್ ಬಡಜೆ, ಓಡಿಸ್ಸಾನಲ್ಲಿ ನಡೆದ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದ ರಾಷ್ಟ್ರ ಮಟ್ಟದ ಇನ್ನೋವೇಟಿವ್ ಗಣಿತ ಮಾದರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವನ್ನು ಪಡೆದು ಸಂಸ್ಥೆಗೆ ಕೀರ್ತಿಯನ್ನು ತಂದಿದ್ದಾನೆ. ಅಮೃತ ಭಾರತಿ ಟ್ರಸ್ಟ್ ನ ಎಲ್ಲಾ ಪದಾಧಿಕಾರಿಗಳು,ಮುಖ್ಯ ಶಿಕ್ಷಕರು,ಬೋಧಕ ಮತ್ತು ಬೋಧಕೇತರ ವರ್ಗದವರು ಇವನಿಗೆ ಅಭಿನಂದನೆ ಸಲ್ಲಿಸಿದ್ದಾರೆ.