ಹೆಬ್ರಿ : ವಿದ್ಯಾರ್ಥಿಗಳು ಕನಸು ಕಾಣಬೇಕು. ನಾವು ಕಾಣುವ ಕನಸು ನಮ್ಮನ್ನು ಗುರಿಯಡೆಗೆ ತಲುಪಿಸುತ್ತದೆ. ಈ ನೆಲೆಯಲ್ಲಿ ಕಾರ್ಯಪ್ರವೃತ್ತರಾಗಬೇಕೇ ಹೊರತು ನಮ್ಮ ಕನಸಿಗೆ ನಾವೇ ತೊಡಕಾಗಬಾರದು. ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶದಷ್ಟು ಬೇರೆ ಯಾವುದೇ ಹಂತದಲ್ಲಿ ಸಿಗುವುದಿಲ್ಲ. ನಮಗೆ ನಾವೇ ಗೌರವವನ್ನು, ನಂಬಿಕೆಯನ್ನು, ರೂಡಿಸಿಕೊಂಡಲ್ಲಿ ಯಶಸ್ಸು ಸಾಧ್ಯವಾಗುತ್ತದೆ ಎಂದು ಉಡುಪಿಯ ಡಾ. ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ಹೇಳಿದರು.

ಇವರು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಿನಗೆ ನೀನೇ ಶಿಲ್ಪಿ ಕಾರ್ಯಕ್ರಮದಡಿ ನಡೆದ ಯುವ ಮನಸ್ಸುಗಳಿಗೆ ಸ್ಫೂರ್ತಿದಾಯಕ ಮಾತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ನಾಗರಾಜ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಬದುಕಿನಲ್ಲಿ ಹಿರಿಯರ ಮಾರ್ಗದರ್ಶನ, ಹಾರೈಕೆ, ಮೌಲ್ಯಯುತವಾದ ಮಾತುಗಳು ವಿದ್ಯಾರ್ಥಿಗಳಾದ ನಿಮ್ಮ ಬದುಕಿನಲ್ಲಿ ಉಪಯುಕ್ತ. ನಿಮ್ಮ ಈ ವಯಸ್ಸಿನಲ್ಲಿ ನಿಮಗೆ ಆರೋಗ್ಯಪೂರ್ಣವಾದ ಮಾರ್ಗದರ್ಶನ, ಹಿತವಚನ ಅತೀ ಅಗತ್ಯ ಎಂದು ಹೇಳಿದರು.

ಈ ಸಂದರ್ಭ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಪ್ನಾ ಎನ್ ಶೆಟ್ಟಿ, ಎಸ್.ಆರ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್, ಎಸ್.ಆರ್. ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಭಗವತಿ, ಉಪಪ್ರಾಂಶುಪಾಲ ದೀಪಕ್ ಎನ್, ಎಸ್.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗೋಪಾಲ ಆಚಾರ್ಯ, ಎಸ್.ಆರ್ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿ ಡಾ.ಗುರುರಾಜ ಪಾಲನ್ ಉಪಸ್ಥಿತರಿದ್ದರು. ಸಂಸ್ಥೆಯ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದೀಪಕ್ ಎನ್ ಸ್ವಾಗತಿಸಿ, ಉಪನ್ಯಾಸಕ ಹರಿಪ್ರಸಾದ್ ನಿರೂಪಿಸಿ, ವಂದಿಸಿದರು.