ಹೆಬ್ರಿ : ಹೆಬ್ರಿ ತಾಲೂಕು 5ನೇ ಸಾಹಿತ್ಯ ಸಮ್ಮೇಳನ ಶಿವಪುರ- 1 ಸರಕಾರಿ ಹಿರಿಯ ಪ್ರಾಥ ಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಸೇನಾನಿ ಎಂ.ಡಿ. ಅಧಿಕಾರಿ ವೇದಿಕೆಯಲ್ಲಿ ಫೆ.16 ರಂದು ಸಂಭ್ರಮದಿಂದ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಗಣೇಶ ಹಾಂಡ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶಿವಪುರದಂತಹ ಸಣ್ಣ ಗ್ರಾಮದಲ್ಲಿ ಸಮ್ಮೇಳನ ನಡೆಯುತ್ತಿರುವುದು ಸಂತಸ ತಂದಿದೆ ಎಂದರು.

ಶಿವಪುರ ಲಕ್ಷ್ಮೀನರಸಿಂಹ ದೇವಸ್ಥಾನದಿಂದ ಸುಮಾರು 800 ಜನರೊಂದಿಗೆ, ಭುವನೇಶ್ವರೀ ದೇವಿಯ ಭವ್ಯ ಪುರ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯನ್ನು ಉದಯ ಕೃಷ್ಣಯ್ಯ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಲೇಖಕಿ ಜಯಲಕ್ಷ್ಮಿ ಅಭಯಕುಮಾರ್ ವಹಿಸಲಿದ್ದಾರೆ ಎಂದರು.

ಸಮ್ಮೇಳನವನ್ನು ಶಾಸಕ ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಲಿದ್ದಾರೆ. ಉದ್ಯಮಿ ಹರೀಶ್ ಶೆಟ್ಟಿ ಪುಸ್ತಕ ಮಳಿಗೆ ಉದ್ಘಾಟಿಸಲಿದ್ದಾರೆ. ನಿಕಟ ಪೂರ್ವ ಸಮ್ಮೇಳನಾಧ್ಯಕ್ಷ, ಅಷ್ಟಾವಧಾನಿ ಡಾ.ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಗೋಕುಲದಾಸ್ ನಾಯಕ್, ಶಾಸಕ ಕಿರಣ್ ಕುಮಾರ್ ಕೊಡ್ಡಿ, ತಹಸೀಲ್ದಾರ್ ಪ್ರಸಾದ್ ಎಸ್.ಎ. ಮೊದಲಾದವರು ಉಪಸ್ಥಿತರಿರುವರು.

ಸ್ವಾಗತ ಸಮಿತಿ ಗೌರವಾಧ್ಯಕ್ಷ ಶಂಕರ ನಾರಾಯಣ ಕೊಡಂಚ, ಸಂಚಾಲಕ ರಮಾನಂದ ಶೆಟ್ಟಿ ಗೌರವ ಸಲಹೆಗಾರ ಮೋಹನದಾಸ್ ನಾಯಕ್, ಉಪಾಧ್ಯಕ್ಷ ರಮೇಶ್ ಕುಮಾರ್. ಕ.ಸಾ.ಪ. ಪದಾಧಿಕಾರಿ ಡಾ.ಪ್ರವೀಣ್ ಕುಮಾರ್, ಅಧ್ಯಕ್ಷ ಶ್ರೀನಿವಾಸ ಭಂಡಾರಿ, ಮಂಜುನಾಥ ಶಿವಪುರ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.