ಹೆಬ್ರಿ :ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೊಕ್ಕರ್ಣೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪಿ ಆರ್ ಎನ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಅನುಷಾ ನಾಯಕ್ ಕನ್ನಡ ಕವನ ವಾಚನದಲ್ಲಿ ದ್ವಿತೀಯ ಬಹುಮಾನ ಮತ್ತು ಅನ್ನಪೂರ್ಣ ತೃತೀಯ ಬಹುಮಾನ ಗಳಿಸಿದ್ದು , ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರು , ಆಡಳಿತ ಮಂಡಳಿಯ ಅಧ್ಯಕ್ಷರು ಹಾಗು ಸರ್ವ ಸದಸ್ಯರು ಅಭಿನಂದಿದ್ದಾರೆ .