ಹೆಬ್ರಿ : ಭಾರತೀಯ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಆಯೋಜಕತ್ವದ INSPIRE AWARD MANAK-2024 ಸ್ಪರ್ಧೆಯಲ್ಲಿ ಹೆಬ್ರಿಯ ಎಸ್.ಆರ್ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿಗಳಾದ 7ನೇ ತರಗತಿಯ ವಿನೀಶ್ ಆಚಾರ್ಯ (Paper Pro SustainaBot), 8ನೇ ತರಗತಿಯ ಪ್ರೀತಮ್ (Electric Dice with Sound), ಮತ್ತು ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ 7ನೇ ತರಗತಿಯ ಸಾನ್ವಿ (Autonomous Womens Safety with Smart Dual Alert), 8ನೇ ತರಗತಿಯ ಅಜಯ್ ಕುಮಾರ್ (Efficient Areca Nut Harvest Automation), 9ನೇ ತರಗತಿಯ ಸೃಜನ್ ಎಸ್ ನಾಯ್ಕ್ (Smart Geyser Monitoring System), ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಐವರು ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಸಿದ್ಧಗೊಳಿಸಿದ್ದರು. ಈ ಮಾದರಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ತಲಾ 10,000 ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದುಕೊಂಡಿದೆ.

ಈ ಹಿಂದೆಯೂ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ, ವಿಜ್ಞಾನ ಸಂಬಂಧಿ ಚಟುವಟಿಕೆಗಳೊಂದಿಗೆ ರಾಜ್ಯ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ನಾಗರಾಜ ಶೆಟ್ಟಿ ಹಾಗೂ ಕಾರ್ಯದರ್ಶಿ ಸಪ್ನಾ.ಎನ್ ಶೆಟ್ಟಿ ಅಭಿನಂದಿಸಿದ್ದಾರೆ.