ಬೆಳಗಾವಿ: ಗಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದ್ದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ನಿರ್ವಹಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಬೆಳಗಾವಿ ಹಾಗೂ ಚಿಕ್ಕೋಡಿ ೨೪*೭ ಕಂಟ್ರೋಲ್ ರೂಮ್‌ನ್ನು ತೆರೆಯಲಾಗಿರುತ್ತದೆ.

ಬೆಳಗಾವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ೦೬ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳಲ್ಲಿ ಇರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಹಾಯವಾಣಿ ಕೇಂದ್ರ ದೂರವಾಣಿ ೦೮೩೧-೨೪೨೦೮೩೫ ಗೆ ಹಾಗೂ ಚಿಕ್ಕೋಡಿ ವಿಭಾಗದೆ ವ್ಯಾಪ್ತಿಯಲ್ಲಿ ಬರುವ ೦೮ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳಲ್ಲಿ ಇರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಹಾಯವಾಣಿ ಕೇಂದ್ರ ದೂರವಾಣಿ ೦೮೩೩೮-೨೭೫೧೦೧ ಗೆ ಸಂಪರ್ಕಿಸಬೇಕೆಂದು ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.