ಆರ್ಡಿ: ಗ್ರಾಮೀಣ ಭಾಗದಲ್ಲಿರುವ ಆರ್ಡಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢ ಶಾಲೆಯಲ್ಲಿ ಉತ್ತಮ ಗುಣ ಮಟ್ಟದ ಶಿಕ್ಷಣಕ್ಕೆ ಅವಕಾಶವಿರುವ ಹಿನ್ನಲೆಯಲ್ಲಿ ಮಕ್ಕಳ ದಾಖಲಾತಿ ಹಾಗೂ ಪಲಿತಾಂಶದಲ್ಲಿ ಶ್ರೇಷ್ಠ ಸಾಧನೆಯೊಂದಿಗೆ ಉನ್ನತ ಸ್ಥಾನಮಾನವನ್ನು ಹೊಂದಿರುವುದು ಪ್ರಶಂಸನೀಯ ಎಂದು ಕುಂದಾಪುರ ಶಾಸಕ ಎ.ಕಿರಣ್ ಕೊಡ್ಗಿ ಹೇಳಿದರು.
ಅವರು ಆರ್ಡಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿಗಳ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎನ್.ಮೋಹನ್ದಾಸ್ ಶೆಟ್ಟಿ ನೂಜಟ್ಟು ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿಗಳ ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಜಯದೇವ ಹೆಗ್ಡೆ ನೂಜಟ್ಟು, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುರೇಶ್ ಶೆಟ್ಟಿ ಆರ್ಡಿ, ನಿವೃತ್ತ ಶಿಕ್ಷಕ ರಾಜೀವ ಶೆಟ್ಟಿ ಬೆಪ್ಡೆ,ನಿವೃತ್ತ ಮುಖ್ಯ ಶಿಕ್ಷಕ ಶೇಖರ್ ಶೆಟ್ಟಿಗಾರ್, ಬೆಳ್ವೆ ಗ್ರಾಮ ಪಂಚಾಯಿತಿ ಸದಸ್ಯ ರೋಹಿತ್ಕುಮಾರ್ ಶೆಟ್ಟಿ ಆರ್ಡಿ, ಸಂತೋಷ ಪೂಜಾರಿ ಕೆರ್ಜಾಡಿ, ಆರ್ಡಿ ಅಭಿಮಾನಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಸುದರ್ಶನ್ ಶೆಟ್ಟಿ ಆರ್ಡಿ, ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಸದಸ್ಯ, ಪತ್ರಕರ್ತ ಕೆ.ಸಂಜೀವ ಆರ್ಡಿ, ಎಸ್ಡಿಎಂಸಿ ಮಾಜಿ ಅಧ್ಯಕ್ಷ ಎ. ಪ್ರಕಾಶ ಶೆಣೈ ಆರ್ಡಿ,
ಹಾಲಿ ಸದಸ್ಯ ರತ್ನಾಕರ ಶೆಟ್ಟಿ ಹಂಜ, ಮುಖ್ಯ ಶಿಕ್ಷಕಿ ಪ್ರತಿಮಾ, ಶಿಕ್ಷಣಾಭಿಮಾನಿಗಳು, ಹಳೆ ವಿದ್ಯಾರ್ಥಿಗಳು, ಎಸ್ಡಿಎಂಸಿ, ಶಿಕ್ಷಕ ವೃಂದವರು,ಪೋಷಕರು ಹಾಗೂ
ಇನ್ನಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ, ಎಸ್ಎಸ್ಎಲ್ಸಿಯಲ್ಲಿ ಉನ್ನತ ಶ್ರೇಣಿಯ ಫಲಿತಾಂಶ ಗಳಿಸಿದ ವಿದ್ಯಾರ್ಥಿಗಳು, ಕ್ರೀಡಾ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ
ಕಾರ್ಯಕ್ರಮ ನಡೆಯಿತು.
ಶಿಕ್ಷಕ ಮೋಹನಕುಮಾರ್ ಶೆಟ್ಟಿ ಸ್ವಾಗತಿಸಿದರು.ಮುಖ್ಯ ಶಿಕ್ಷಕಿ ಪ್ರತಿಮಾ ವರದಿ ಸಲ್ಲಿಸಿದರು.ಶಿಕ್ಷಕಿ ವೈಶಾಲಿ ರಾವ್, ದೈಹಿಕ ಶಿಕ್ಷಣ ಶಿಕ್ಷಕಿ ಹೇಮಲತಾ ಹೆಗ್ಡೆ ಬಹುಮಾನ ಪಟ್ಟಿ ವಾಚಿಸಿದರು.
ಶಿಕ್ಷಕ ಪ್ರಕಾಶ ಭಟ್,ಜಯಶಿಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸುಮಲತಾ,ಗೌರವ ಶಿಕ್ಷಕಿ ಜ್ಯೋತಿ ಶೆಟ್ಟಿ, ದೀಪಾ ಶೆಟ್ಟಿ,ಗುಮಾಸ್ತೆ ಜೋಸ್ನಾ ಸಹಕರಿಸಿದರು. ಶಿಕ್ಷಕ ಶ್ರೀಕಾಂತ ವಂದಿಸಿದರು.