ಹೆಬ್ರಿ : ಉನ್ನತ ಶಿಕ್ಷಣದಲ್ಲೂ ಐಚ್ಚಿಕ ವಿಷಯಗಳ ಜೊತೆಗೆ ಭಾಷಾ ವಿಷಯಗಳಿಗೂ ಒತ್ತು ನೀಡುವುದು ಭಾಷೆಗಳ ಬೆಳವಣಿಗೆಗೆ ಸಹಕಾರಿ. ಸರಸ್ವತಿ ಖಜಾನೆಯನ್ನು ಬಳಸಿದಷ್ಟು ಖಾಲಿ ಆಗದೆ ಜ್ಞಾನ ಭಂಡಾರ ಹೆಚ್ಚುತ್ತದೆ. ಅಂತೆಯೆ ಹಿಂದಿ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳುವುದರಿಂದ ಜ್ಞಾನಾಭಿವೃದ್ಧಿ ಆಗುತ್ತದೆ. ಅಲ್ಲದೆ ಹಿಂದಿ ಭಾಷೆ ಸಹಿತ ನಮ್ಮ ಸಂವಿಧಾನದಲ್ಲಿ ಮಾನ್ಯತೆ ಪಡೆದ ಎಲ್ಲಾ ಭಾಷೆಗಳೂ ರಾಷ್ಟ್ರ ಭಾಷೆಗಳೇ ಎಂದು ನಿವೃತ್ತ ಪ್ರಾಂಶುಪಾಲೆ ಹಾಗೂ ಸಾಹಿತಿ ಡಾ. ಮಾಧವಿ ಎಸ್ ಭಂಡಾರಿ ಹೇಳಿದರು.

ಹೆಬ್ರಿ ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಹಿಂದಿ ದಿವಸ್ ಆಚರಣೆಯಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿಂದಿ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್ ಆರ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಪ್ರಶಾಂತ್, ಎಸ್ ಆರ್ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲೆ ಭಗವತಿ ಮತ್ತು ಎಸ್ ಆರ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಗೋಪಾಲ್ ಆಚಾರ್ಯ ಉಪಸ್ಥಿತರಿದ್ದರು. ಹಿಂದಿ ಉಪನ್ಯಾಸಕಿ ಮತ್ತು ಕಾರ್ಯಕ್ರಮದ ಸಂಯೋಜಕಿ ವನಿತಾ ತೋಳಾರ್ ಸ್ವಾಗತಿಸಿ, ವಿದ್ಯಾರ್ಥಿನಿ ಸೃಷ್ಟಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಪೃಥ್ವಿ ವಂದಿಸಿದರು.