ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನಲೆಯಲ್ಲಿ ಶುಕ್ರವಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂನ್ 28ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಆದರೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.
ಉಡುಪಿ ಜಿಲ್ಲೆಯಲ್ಲಿ ರಜೆ ಇಲ್ಲ :
ರೆಡ್ ಅಲರ್ಟ್ ಇದ್ದರೂ ಉಡುಪಿ ಜಿಲ್ಲೆಯಲ್ಲಿ ಜೂನ್ 28ರಂದು ಎಂದಿನಂತೆ ಶಾಲಾ- ಕಾಲೇಜು ನಡೆಯಲಿದೆ. ಯಾವುದೇ ರಜೆ ಘೋಷಣೆ ಮಾಡಿಲ್ಲ ಎಂದು ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ತಿಳಿಸಿದ್ದಾರೆ.