ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ವ್ಯಾಪಕ ಮಳೆ ಹಿನ್ನಲೆಯಲ್ಲಿ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜುಲೈ 31ರ ಬುಧವಾರದಂದು ರಜೆ ಇರಲಿದೆ. ಹೊಸನಗರ, ಸಾಗರ ಮತ್ತು ತೀರ್ಥಳ್ಳಿ ತಾಲೂಕುಗಳ ಅಂಗನವಾಡಿಯಿಂದ ದ್ವಿತೀಯ ಪಿಯುಸಿ ವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಇರಲಿದೆ.