ಬೆಳಗಾವಿ.: ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಏ.30 ರಂದು ಬೆಳಗ್ಗೆ 8 ಗಂಟೆಗೆ ಮತದಾನದ ಜಾಗೃತಿಗಾಗಿ ಹಾಟ್ ಏರ್ ಬಲೂನ್ ಹಾರಾಟ ಹಾಗೂ ಬೆಳಗಾವಿ ಜಿಲ್ಲೆ ಮತದಾನ ಜಾಗೃತಿ ಮಾಸ್ಕಾಟ ಅನಾವರಣ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಜಿ.ಪಂ. ಸಿಇಒ ರಾಹುಲ್ ಶಿಂಧೆ ತಿಳಿಸಿದ್ದಾರೆ.
ಜಿಪಂ ಸಿಇಒ ರಾಹುಲ್ ಶಿಂಧೆ, ಜಿಪಂ ಯೋಜನಾ ನಿರ್ದೇಶಕ ಎಂ.ಕೃಷ್ಣರಾಜು, ಜಿಪಂ ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ್, ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಡಿ, ಜಿಪಂ. ಲೆಕ್ಕಾಧಿಕಾರಿ ಗಂಗಾ ಹಿರೇಮಠ್ ಮೊದಲಾದವರು ಭಾಗವಹಿಸಲಿದ್ದಾರೆ.