ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಹೈಕಮಾಂಡ್ ಹೊಸ ರಣತಂತ್ರ ರೂಪಿಸಿದೆ. ರಾಜ್ಯ ಯುವ ಕಾಂಗ್ರೆಸ್ ಗೆ ನೂತನ ಕಾರ್ಯಾಧ್ಯಕ್ಷರ ನೇಮಕ ಮಾಡಿದೆ.
ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಹೆಚ್.ಎಸ್.ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮಂಜುನಾಥ್ ಗೆ ಪಟ್ಟ ಕಟ್ಟಲಾಗಿದೆ.
ಈ ಮೂಲಕ ಕಾಂಗ್ರೆಸ್ ಲೋಕಸಭಾ ಚುನಾವಣೆಗೂ ಮುನ್ನ ಹೊಸ ತಂತ್ರ ಹೆಣೆದಿದೆ. ಮಂಜುನಾಥ್ ಈ ಹಿಂದೆ ಮಹಾಲಕ್ಷ್ಮೀ ಲೇಔಟ್ ನಿಂದ ಸ್ಪರ್ಧಿಸಿದ್ದರು. ಈಗ ಮಂಜುನಾಥ್ ಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.