Join The Telegram | Join The WhatsApp |
ಹುಬ್ಬಳ್ಳಿ –
ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಈಗ ಹಸಿರು ವಿಮಾನ ನಿಲ್ದಾಣವನ್ನಾಗಿ ಬದಲಿಸಲಾಗಿದೆ. ಈ ಮೂಲಕ ರಾಜ್ಯದ ಮೊದಲ ಹಸಿರು ವಿಮಾನ ನಿಲ್ದಾಣವಾಗಿದೆ ಎಂದು ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿಯವರ ಕನಸಿನಂತೆ 2030 ರೊಳಗೆ ಶೇಕಡಾ 50 ರಷ್ಟು ಗ್ರೀನ್ ಎನರ್ಜಿಯತ್ತ ದೇಶ ಸಾಗಬೇಕಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ಶೇ.100 ರಷ್ಟು ಅಂದರೆ ಸಂಪೂರ್ಣ ಸೌರಶಕ್ತಿಯ ಮೂಲಕ ಕಾರ್ಯನಿರ್ವಹಿಸಲಿದೆ” ಎಂದು ಪ್ರಲ್ಹಾದ್ ಜೋಶಿ ತಮ್ಮ ಟ್ವೀಟರ್ ನಲ್ಲಿ ಹೇಳಿಕೊಂಡಿದ್ದಾರೆ.
ಸುಮಾರು 8MWp ಸೌರಶಕ್ತಿಯಿಂದ ವಿದ್ಯುತ್ ಶಕ್ತಿ ಉತ್ಪಾದಿಸುವ ಘಟಕದ ಸ್ಥಾಪನೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಆರಂಭವಾಗಿದೆ. ಅದರ ಶೇಖರಣೆಯು ಹುಬ್ಬಳ್ಳಿಯಲ್ಲಿಯೇ ಆಗಲಿದೆ. ಶೇಖರಿಸಿದ ವಿದ್ಯುತ್ ಶಕ್ತಿಯನ್ನು ಬೆಳಗಾವಿ, ಮೈಸೂರು, ಬಳ್ಳಾರಿ, ಬೆಂಗಳೂರು ಹಾಗೂ ಇನ್ನಿತರ ವಿಮಾನ ನಿಲ್ದಾಣಗಳಿಗೆ ಸರಬರಾಜು ಮಾಡಲಾಗುವುದು ಎಂದು ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.
Join The Telegram | Join The WhatsApp |