ಬೆಂಗಳೂರು: ನನ್ನ ಆಕ್ಷೇಪಾರ್ಹ ಹೇಳಿಕೆಗಳು ಯಾರಿಗಾದರೂ ನೋವುಂಟು ಮಾಡಿದ್ದರೆ ಅದಕ್ಕಾಗಿ ಪ್ರಾಮಾಣಿಕ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದ ತಿಳಿಸಿದ್ದಾರೆ. ಶನಿವಾರ ಹೈಕೋರ್ಟಿನ 23ನೇ ಕೋರ್ಟ್ ಹಾಲ್ ನಲ್ಲಿ ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳು ಮತ್ತು ವಕೀಲರ ಎದುರು ಮುಕ್ತ ನ್ಯಾಯಾಲಯದಲ್ಲಿ ಅವರು ಈ ವಿಷಾದ ವ್ಯಕ್ತಪಡಿಸಿದ್ದಾರೆ. ನ್ಯಾಯಮೂರ್ತಿ ಶ್ರೀಶಾನಂದ ಅವರು ನೀಡಿದ್ದ ಕೆಲ ಹೇಳಿಕೆಗೆ ಸುಪ್ರೀಂ ಕೋರ್ಟ್ ಅಸಮಾಧಾನ ಸೂಚಿಸಿತ್ತು.