ದೆಹಲಿ:
ಈಗಲೇ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯ ಎನ್‌ಡಿಎ 24 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ ಎಂದು ಖಾಸಗಿ ಸುದ್ದಿವಾಹಿನಿ ಇಂಡಿಯಾ ಟುಡೇ ‘ಮೂಡ್ ಆಫ್ ದಿ ನೇಷನ್‌ ಸಮೀಕ್ಷೆ’ ತಿಳಿಸಿದೆ.
ರಾಜ್ಯದ ಲೋಕಸಭಾ ಕ್ಷೇತ್ರಗಳಲ್ಲಿ 2023 ಡಿಸೆಂಬರ್ 15 ರಿಂದ 2024 ಜನವರಿ 28 ರ ನಡುವೆ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯನ್ನು ಮೂಡ್ ಆಫ್ ದಿ ನೇಷನ್‌ ಬಿಡುಗಡೆ ಮಾಡಿದೆ.
ಕರ್ನಾಟಕದಲ್ಲಿ ಬಿಜೆಪಿ+ ಜೆಡಿಎಸ್‌ – 24 ಸ್ಥಾನಗಳಲ್ಲಿ(ಶೇ. 53 ಮತಗಳು) ಜಯಗಳಿಸುವ ಸಾಧ್ಯತೆಯಿದೆ. ಹಾಗೂ ಆಡಳಿತಾರೂಢ ಕಾಂಗ್ರೆಸ್‌
4 ಸ್ಥಾನಗಳಲ್ಲಿ (ಶೇ.42ರಷ್ಟು ಮತಗಳು) ಜಯಗಳಿಸುವ ಸಾಧ್ಯತೆಯಿದೆ ಎಂದು ಸಮೀಕ್ಷೆ ಹೇಳಿದೆ.
2019 ರಂತೆಯೇ ಬಿಜೆಪಿಯು ಶೇಕಡಾ 53 ರಷ್ಟು ಮತಗಳನ್ನು ಗಳಿಸುವ ನಿರೀಕ್ಷೆಯಿದೆ. ವಿಪಕ್ಷಗಳ ಮೈತ್ರಿಕೂಡ ಇಂಡಿಯಾ-ಬ್ಲಾಕ್‌ 2019 ರಂತೆಯೇ ಶೇಕಡಾ 42 ರಷ್ಟು ಮತಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ಸಮೀಕ್ಷೆ ತಿಳಿಸಿದೆ.
2019 ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 28 ಕ್ಷೇತ್ರಗಳಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಜಯಗಳಿಸಿತ್ತು. ಕಾಂಗ್ರೆಸ್ ಕೇವಲ ಒಂದು ಸ್ಥಾನಗಳಲ್ಲಿ ಮಾತ್ರ ಜಯಗಳಿಸಿತ್ತು. ಜೆಡಿಎಸ್ ಒಂದು ಸ್ಥಾನ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು.