ಬೆಳಗಾವಿ :
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ 2023-24ನೇ ಸಾಲಿನ (ಜನವರಿ ಆವೃತ್ತಿಯ) ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಥಮ ಬಿಎ. ಬಿಕಾಂ, ಬಿಸಿಎ ಹಾಗೂ ಪ್ರಥಮ ಎಂಎ ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಇತಿಹಾಸ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜ ಶಾಸ್ತ್ರ, ಸಾರ್ವಜನಿಕ ಆಡಳಿತ, ಸಮೂಹ ಮತ್ತು ಪತ್ರಿಕೋದ್ಯಮ, ಎಂಎಸ್‌ಸಿ, ಎಂಎಸ್.ಡಬ್ಲ್ಯೂ, ಬಿಎಸ್.ಡಬ್ಲ್ಯೂ, ಎಂಸಿಎ ಹಾಗೂ ಡಿಪ್ಲೋಮಾ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ. 15 ರಷ್ಟು ವಿನಾಯಿತಿ ನೀಡಲಾಗಿದೆ. ದಂಡ ಶುಲ್ಕವಿಲ್ಲದೆ ಪ್ರವೇಶ ಪಡೆಯಲು ಮಾರ್ಚ್ 31 ಅಂತಿಮ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬಿಎಡ್ ಕಾಲೇಜು ಆವರಣ, ನೆಹರು ನಗರ, ಬೆಳಗಾವಿ ಮೊ.ಸಂ ( 9606040407 ಹಾಗೂ ದೂರವಾಣಿ : 0831-2002815) ಹಾಗೂ ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.ksoumysuru.ac.in
ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಬೆಳಗಾವಿ ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಅಮೃತ್ ಎಂ. ನಾಯ್ಡು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.