ಬೆಂಗಳೂರು :
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಹಾಗೂ ತೃತೀಯ ವರ್ಷದ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ, ಬಿಸಿಎ ಸ್ನಾತಕ ಕೋರ್ಸುಗಳು ಮತ್ತು ಅಂತಿಮ ವರ್ಷದ ಸ್ನಾತಕೋತ್ತರ ಎಂಎ, ಎಂಕಾಂ, ಎಂಎಸ್ಸಿ, ಎಂಬಿಎ, ಎಂಸಿಜೆ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿದೆ.

ಅರ್ಹ ವಿದ್ಯಾರ್ಥಿಗಳು ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಡಿ.31 ಕಡೆಯ ದಿನವಾಗಿದೆ. ಬಿಪಿಎಲ್ ಕಾರ್ಡು ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ.15 ರಷ್ಟು ವಿನಾಯಿತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮಲ್ಲೇಶ್ವರಂನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿರುವ ಕೆಎಸ್‌ಒಇಯು ಬೆಂಗಳೂರು ಮಹಿಳಾ ಪ್ರಾದೇಶಿಕ ಕೇಂದ್ರ ಕಚೇರಿಗೆ ಭೇಟಿ ನೀಡಬಹುದು. ಅಥವಾ ಪ್ರಾದೇಶಿಕ ನಿರ್ದೇಶಕಿ ಶಶಿಕಲಾ ಅವರನ್ನು ದೂ: 080 23448811, 9741197921 ಪ್ರಕಟಣೆಯಲ್ಲಿ ತಿಳಿಸಿದೆ.