Join The Telegram | Join The WhatsApp |
ಬೆಂಗಳೂರು-
2022-23ನೇ ಹಂಗಾಮಿಗೆ ಕೇಂದ್ರ ಸರ್ಕಾರವು ನಿಗದಿಪಡಿಸಿರುವ ನ್ಯಾಯಯುತ ಮತ್ತು ಲಾಭದಾಯಕ ಬೆಲೆಗಿಂತ ಮೇಲೆ ಹೆಚ್ಚುವರಿ ಕಬ್ಬಿನ ಬೆಲೆಯನ್ನು ನಿಗದಿಗೊಳಿಸುವ ಕುರಿತು ಕರ್ನಾಟಕ ಕಬ್ಬು (ಖರೀದಿ ಮತ್ತು ಸರಬರಾಜು ನಿಯಂತ್ರಣ) ಅಧಿನಿಯಮ 2013 ಹಾಗೂ ತಿದ್ದುಪಡಿ ಅಧಿನಿಯಮ, 2014 ರ ಕಲಂ 4(ಎ) ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಎಥನಾಲ್ ಉತ್ಪಾದಿಸುವ ರಾಜ್ಯದ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡಿದ ರೈತರಿಗೆ ಮೊದಲ ಕಂತಿನಲ್ಲಿ ಕೇಂದ್ರ ಸರ್ಕಾರವು 2022-23ನೇ ಸಾಲಿಗೆ ನಿಗದಿಪಡಿಸಿರುವ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯ (FRP) ಜೊತೆಗೆ ಪ್ರತಿ ಮೆಟ್ರಿಕ್ ಟನ್ ಒಂದಕ್ಕೆ ರೂ.50/- (ಐವತ್ತು ರೂಪಾಯಿಗಳು ಮಾತ್ರ) ಗಳನ್ನು ಹೆಚ್ಚುವರಿಯಾಗಿ ಪಾವತಿಸಲು ಅಧಿಸೂಚಿಸಿ ಆದೇಶಿಸಲಾಗಿದೆ.
2022-23ನೇ ಸಾಲಿನಲ್ಲಿ ಕಬ್ಬು ನುರಿಸುವ ಹಂಗಾಮು ಮುಗಿದ ನಂತರ ವಾಸ್ತವಿಕವಾಗಿ ಸಕ್ಕರೆ, ಎಥನಾಲ್ ಮತ್ತು ಇತರೆ ಉಪ ಉತ್ಪನ್ನಗಳ ಮಾರಾಟದಿಂದ ಬರುವ ಅಂತಿಮ ಆದಾಯವನ್ನು ಹಂಚಿಕೆ’ ಸೂತ್ರದ ಪ್ರಕಾರ ಪರಿಗಣಿಸಿ, ಅಂತಿಮ ಕಬ್ಬಿನ ದರವನ್ನು ನಿರ್ಧರಿಸಲಾಗುವುದು. ಸದರಿ ಆದೇಶವು ಮಾನ್ಯ ಉಚ್ಛ, ನ್ಯಾಯಾಲಯ, ಬೆಂಗಳೂರು ಇಲ್ಲಿ ದಾಖಲಾಗಿರುವ ರಿಟ್ ಅರ್ಜಿ ಸಂಖ್ಯೆ 23741/2022 ರ ಪ್ರಕರಣದಲ್ಲಿ ನೀಡುವ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಕಬ್ಬು ನಿಯಂತ್ರಣ ಮಂಡಳಿ, ಆಯುಕ್ತರು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರು ತಿಳಿಸಿದ್ದಾರೆ.
Join The Telegram | Join The WhatsApp |