ಬೆಂಗಳೂರು: ತೆಲಂಗಾಣ ರಾಜ್ಯದ ಲೋಕಸಭಾ ಚುನಾವಣೆ ಉಸ್ತುವಾರಿಯನ್ನು ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ ಪಾಟೀಲ ಅವರಿಗೆ ವಹಿಸಲಾಗಿದೆ.

ಹಾಲಿ ಸಂಸದರೂ, ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲು ಅವರಿಗೆ ಈ ಬಾರಿ ಟಿಕೆಟ್ ತಪ್ಪಿದ್ದರಿಂದ ಕೇರಳ ರಾಜ್ಯದ ಚುನಾವಣಾ ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬುಧವಾರ ರಾತ್ರಿ ಪ್ರಕಟಣೆ ಹೊರಡಿಸಿದ್ದಾರೆ. ಅದೇ ರೀತಿ ಪಕ್ಷದ ಹಿರಿಯ ಮುಖಂಡ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದ ನಿರ್ಮಲ್‌ಕುಮಾ‌ರ್ ಸುರಾನಾ ಅವರಿಗೆ ಮಹಾರಾಷ್ಟ್ರ ರಾಜ್ಯದ ಚುನಾವಣಾ ಸಹ ಉಸ್ತುವಾರಿ ಜವಾಬ್ದಾರಿಯನ್ನು ನೀಡಲಾಗಿದೆ.