ಹೆಬ್ರಿ : ಹೆಬ್ರಿಯ ಎಸ್.ಆರ್. ಪಬ್ಲಿಕ್ ಸ್ಕೂಲ್ನ ಸಿ.ಬಿ.ಎಸ್.ಇ ವಿಭಾಗವು ಹತ್ತನೇ ತರಗತಿಯಲ್ಲಿ 100% ಫಲಿತಾಂಶವನ್ನು ದಾಖಲಿಸಿಕೊಂಡು ಸತತ 15 ವರ್ಷದಲ್ಲಿಯೂ 100% ಫಲಿತಾಂಶವನ್ನು ದಾಖಲಿಸಿಕೊಂಡಿದೆ.

ಈ ಬಾರಿಯ ಫಲಿತಾಂಶದಲ್ಲಿ ಅಮೂಲ್ಯ ಮತ್ತು ವಿಶ್ವಾಸ್ ಸಿ.ಎಚ್ 475/500 (95.00%) ಅಂಕ ಪಡೆದು ಪ್ರಥಮ ಸ್ಥಾನ, ಸಮೀಕ್ಷಾ ಜಿ.ನಾಯ್ಕ್ ಮತ್ತು ಶ್ರುತಿ ಪ್ರಭು 469/500 (93.80%)ಅಂಕ ಪಡೆದು ದ್ವಿತೀಯ ಸ್ಥಾನ, ರಿಶಿತಾ ಎಸ್ ಶೆಟ್ಟಿ 465/500(93.60%)ಅಂಕ ಪಡೆದು ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾದ 112 ವಿದ್ಯಾರ್ಥಿಗಳಲ್ಲಿ, 25 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 84 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ. ಶಾಲೆಯು 100% ಫಲಿತಾಂಶವನ್ನು ದಾಖಲಿಸಿಕೊಂಡಿದೆ.

ಸಾಧಕ ವಿದ್ಯಾರ್ಥಿಗಳನ್ನು  ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ  ಎಚ್.ನಾಗರಾಜ ಶೆಟ್ಟಿ, ಕಾರ್ಯದರ್ಶಿ ಸ್ವಪ್ನಾ ಎನ್ ಶೆಟ್ಟಿ ಅಭಿನಂದಿಸಿದ್ದಾರೆ.