ರಾಯಚೂರು: ಹನುಮ ಮಾಲಾಧಾರಿಗಳಿಗೆ ಬೊಲೇರೋ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಸಾವಿಗೀಡಾಗಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ರಾಯಚೂರಿನ ಶಕ್ತಿನಗರದ ಯಾದವ ನಗರ ಕ್ರಾಸ್ ಬಳಿ ಇಂದು ಬೆಳಗ್ಗೆ ಘಟನೆ ನಡೆದಿದೆ. ಹನುಮಮಾಲಾಧಾರಿಗಳು ಹನುಮಜಯಂತಿ ಪ್ರಯುಕ್ತ ಕೃಷ್ಣಾ ನದಿಗೆ ನೀರು ತರಲು ಬಂದಾಗ ಘಟನೆ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೊಲೆರೋ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ.

ಅಯ್ಯನಗೌಡ (28) ಮಹೇಶ (22), ಉದಯಕುಮಾರ (28) ಮೃತಪಟ್ಟಿದ್ದಾರೆ. ರಮೇಶ, ಭೂಷಣ ಎಂಬುವರಿಗೆ ಗಂಭೀರ ಗಾಯವಾಗಿದೆ. ಎಲ್ಲರೂ ರಾಯಚೂರಿನ ಹೆಗಸನಹಳ್ಳಿ ನಿವಾಸಿಗಳು. ಕೋಳಿ ತುಂಬಿಕೊಂಡು ಬರುತ್ತಿದ್ದ ಬುಲೇರೋ ವಾಹನ ಚಾಲಕ ನಿರ್ಲಕ್ಷ್ಯದಿಂದ ಹಾಗೂ ವೇಗವಾಗಿ ಚಲಾಯಿಸಿ ಅಪಘಾತಕ್ಕೆ ಕಾರಣನಾಗಿದ್ದಾನೆ. ಶಕ್ತಿ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.