ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ. ಒಟ್ಟು ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯಗಳಿಸಿದ್ದಾರೆ. ಬಿಜೆಪಿ – ಜೆಡಿಎಸ್‌ ಮೈತ್ರಿಯಿಂದ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಗೆ ದೊಡ್ಡ ಮುಖಭಂಗವಾಗಿದೆ. ಒಟ್ಟು 222 ಶಾಸಕರು ಮತದಾನ ಮಾಡಿದ್ದಾರೆ.

ಪಡೆದ ಮತ : ಅಜಯ್ ಮಾಕನ್ -47, ನಾಸೀರ್ ಹುಸೇನ್ – 46, ಜಿ.ಸಿ. ಚಂದ್ರಶೇಖರ – 45, ನಾರಾಯಣಸಾ ಭಾಂಡಗೆ – 48, ಕುಪೇಂದ್ರ ರೆಡ್ಡಿ – 35 ಮತ ಗಳಿಸಿದ್ದಾರೆ.