
ಹೆಬ್ರಿ: ಬೇಳಂಜೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ನಿಧಿಕುಂಭ ಸ್ಥಾಪನೆ ಸಹಿತ ಶಿಲಾನ್ಯಾಸ ಕಾರ್ಯಕ್ರಮ ಈಚೆಗೆ ನಡೆಯಿತು.
ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ, ಶಾಸಕ ಸುನಿಲ್ ಕುಮಾರ್ ಶಿಲಾನ್ಯಾಸ ನೆರವೇರಿಸಿದರು. ಸುಧೀರ ಹೊಳ್ಳ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿಕೊಟ್ಟರು.
ಜೀರ್ಣೋದ್ಧಾರ ಸಮಿತಿ ಗೌರವ ಸಲಹೆಗಾರರಾದ ಬಿ.ವಿ.ಭಟ್, ಬಿ.ಹರ್ಷ ಶೆಟ್ಟಿ, ಅಧ್ಯಕ್ಷ ನಿತ್ಯಾನಂದ ಶೆಟ್ಟಿ, ಉಪಾಧ್ಯಕ್ಷ ಬೋಜು ಕುಲಾಲ, ಕಾರ್ಯದರ್ಶಿ ರಾಮಕೃಷ್ಣ ಹಾಂಡ, ಶಿಲ್ಪಿ ಉದಯ ಕುಮಾರ್ ಕಾರ್ಕಳ, ದೇವಸ್ಥಾನ ಟ್ರಸ್ಟ್ ಗೌರವಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ, ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ, ಕಾರ್ಯದರ್ಶಿ ಅಮೃತ್ ಕುಮಾರ್ ಶೆಟ್ಟಿ ಇದ್ದರು.