ವಾರಾಣಸಿ: ಸತತ ಮೂರನೇ ಬಾರಿಗೆ ಪ್ರಧಾನಿ ಹುದ್ದೆ ಏರುವ ನಿರೀಕ್ಷೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಅಯೋಧ್ಯೆ ರಾಮಮಂದಿರದಲ್ಲಿ ನಡೆದ ಬಾಲಕ ರಾಮನ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದ ಗಣೇಶ್ವರ ಶಾಸ್ತ್ರಿಗಳು ಪ್ರಧಾನಿ ನರೇಂದ್ರ ಮೋದಿ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಲಿದ್ದಾರೆ ಎನ್ನಲಾಗಿದೆ.