ಆರ್ಡಿ: ಮನುಷ್ಯ ಮದ್ಯಪಾನ ಸೇರಿದಂತೆ ಇನ್ನಿತರ ದುಶ್ಚಟಗಳಿಗೆ ಬಲಿಯಾಗಿ ಜೀವನದ ಉತ್ತಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವುದು ದುರದೃಷ್ಟಕರ. ಮದ್ಯವರ್ಜನ ಶಿಬಿರವು ಮದ್ಯವ್ಯಸನಿಗಳಿಗೆ ದುಶ್ಚಟದಿಂದ ಮುಕ್ತಿ ನೀಡಿ ನವಜೀವನವನ್ನು ರೂಪಿಸಿಕೊಳ್ಳಲು ಪ್ರೇರಣೆಯನ್ನು ನೀಡುತ್ತದೆ ಎಂದು ಶಂಕರನಾರಾಯಣ ಪೊಲೀಸ್ ಠಾಣೆ ಉಪನಿರೀಕ್ಷಕ ನಾಸೀರ್ ಹುಸೇನ್ ಹೇಳಿದರು.

ಅವರು ಆರ್ಡಿ ಚಿತ್ತೇರಿ ಶ್ರೀದುರ್ಗಾಪರಮೇಶ್ವರಿ ಸಿದ್ದಿವಿನಾಯಕ ದೇವಸ್ಥಾನದ ಸಮೀಪದ ಕಮಲ ವಿಠ್ಠಲ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮದ್ಯವರ್ಜನ ಶಿಬಿರ
ವ್ಯವಸ್ಥಾಪನಾ ಸಮಿತಿ ಆರ್ಡಿ,ಬೆಳ್ವೆ ವಲಯ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ 1869 ನೇ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಭಾನುವಾರ
ಮಾತನಾಡಿದರು.

1869 ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಆರ್ಡಿ ಅಧ್ಯಕ್ಷ ಸುರೇಶ ಶೆಟ್ಟಿ ಆರ್ಡಿ ಅಧ್ಯಕ್ಷತೆ ವಹಿಸಿದ್ದರು.ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಆರ್ ನವೀನ್‌ಚಂದ್ರ ಶೆಟ್ಟಿ ರಟ್ಟಾಡಿ, ಹೆಬ್ರಿ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ,ಉಡುಪಿ ಪ್ರಾದೇಶಿಕ ಕಚೇರಿ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ,ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಹೆಬ್ರಿ ತಾಲೂಕು ಕೇಂದ್ರ ಸಮಿತಿ ಅಧ್ಯಕ್ಷ ಪ್ರವೀಣ ಹೆಗ್ಡೆ, ಬೆಳ್ವೆ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ,ಕುಂದಾಪುರ ವಿಭಾಗ ಲೋಕೋಪಯೋಗಿ ಇಲಾಖೆ ಅಭಿಯಂತರ ಮಹಾಬಲ ನಾಯ್ಕ ಅಲ್ಬಾಡಿ, ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷ ವೈ.ವಿಜಯಕುಮಾರ್ ಶೆಟ್ಟಿ ಗೋಳಿಯಂಗಡಿ, ಬೆಳ್ವೆ ವಲಯ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಒಕ್ಕೂಟಗಳ ಅಧ್ಯಕ್ಷ ಕೃಷ್ಣ ಪುತ್ರನ್ ಆರ್ಡಿ, ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಹಾಗೂ ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್ ಜಯರಾಮ ಶೆಟ್ಟಿ ಸೂರ‍್ಗೋಳಿ, ಬೆಳ್ವೆ ರಾಧಿಕಾ ಕ್ಯಾಶ್ಯೂ ಉದ್ಯಮಿ ಬಿ.ರಾಜೇಂದ್ರ ಕಿಣಿ ಬೆಳ್ವೆ,ಜನಜಾಗೃತಿ ವೇದಿಕೆ ಸದಸ್ಯ ಬಿ.ಶಂಕರ ಶೆಟ್ಟಿ ಬೆಳ್ವೆ, ವೈ.ಪಟ್ಟಾಭಿರಾಮ ಮರೂರು,ಸುಧಾಕರ ಶೆಟ್ಟಿ ಅರಸಮ್ಮಕಾನು,ಸುದರ್ಶನ ಶೆಟ್ಟಿ ಆರ್ಡಿ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಹೆಬ್ರಿ ತಾಲೂಕು ಅಧ್ಯಕ್ಷ ಗೋಪಾಲ ಕುಲಾಲ್, ಶಿಬಿರಾಧಿಕಾರಿ ವಿದ್ಯಾಧರ, ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜೇಶ್ವರಿ ಎ ಜಿ, ಆರೋಗ್ಯ ಇಲಾಖೆಯ ಜಯಲಕ್ಷ್ಮಿ,ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ,ಬಿಸಿ ಟ್ರಸ್ಟ್ ಹೆಬ್ರಿ ತಾಲೂಕು ಯೋಜನಾಧಿಕಾರಿ ಲೀಲಾವತಿ ಹಾಗೂ ಇನ್ನೀತರರು ಉಪಸ್ಥಿತರಿದ್ದರು.ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಆರ್ಡಿ,ಬೆಳ್ವೆ ವಲಯ ಇವರ ಆಶ್ರಯದಲ್ಲಿ ಶ್ರೀಕ್ಷೇತ್ರ ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್(ರಿ.),ಹೆಬ್ರಿ ತಾಲೂಕು.ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.),ಬೆಳ್ತಂಗಡಿ.ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಲಯನ್ಸ್ ಕ್ಲಬ್ ಆರ್ಡಿ ಬೆಳ್ವೆ ಗೋಳಿಯಂಗಡಿ,ಜಸ್ಟೀಸ್ ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮಂಗಳೂರು, ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರ,ಆರಕ್ಷಕ ಠಾಣೆ ಶಂಕರನಾರಾಯಣ,ಅಮಾಸೆಬೈಲು, ಹೆಬ್ರಿ.ಗ್ರಾಮ ಪಂಚಾಯತ್  ಬೆಳ್ವೆ,ಮಡಾಮಕ್ಕಿ,ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘ,ನಿ.ಬೆಳ್ವೆ.ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು ಬೆಳ್ವೆ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ತಾಲೂಕು ಭಜನಾ ಪರಿಷತ್,ಹೆಬ್ರಿ ತಾಲೂಕು ನವಜೀವನ ಸಮಿತಿ,ಸ್ಥಳೀಯ ಸಂಘ-ಸಂಸ್ಥೆಗಳು ಹಾಗೂ

ಸಾರ್ವಜನಿಕರ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ
ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನ
ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ 1869 ಮದ್ಯವರ್ಜನ ಶಿಬಿರ ನಡೆಯುತ್ತಿದೆ.
ಶ್ರೀಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ,ಬಿಸಿ ಟ್ರಸ್ಟ್ ಹೆಬ್ರಿ ತಾಲೂಕು ಯೋಜನಾಧಿಕಾರಿ ಲೀಲಾವತಿ
ಸ್ವಾಗತಿಸಿದರು.ಮಂಜುನಾಥ ಮರೂರು ಪ್ರಾರ್ಥಿಸಿದರು. ಉಡುಪಿ ಪ್ರಾದೇಶಿಕ ಕಚೇರಿ ತಾಲೂಕು ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕ ಮಾತನಾಡಿದರು.ಕೃಷಿ ಅಧಿಕಾರಿ ಉಮೇಶ್ ಬಿ.ಕೆ, ಬೆಳ್ವೆ ವಲಯ ಮೇಲ್ವಿಚಾರಕ ರಾಘವೇಂದ್ರ ಗೌಡ
ನಿರೂಪಿಸಿದರು. ಸೇವಾ ಪ್ರತಿನಿಧಿ ಪ್ರಶಾಂತ ಗುಮ್ಮೋಲ
ವಂದಿಸಿದರು.