ಹೆಬ್ರಿ : ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಿರಂತರ ಮೌಲ್ಯಮಾಪನ ಮಾಡುವ ಉದ್ದೇಶದಿಂದ ಅಮೃತ ಇ ಟೆಸ್ಟ್ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ತತ್ವo ಸಾಫ್ಟ್ ವೇರ್ ನ ಸ್ಥಾಪಕ ವಿನಾಯಕ ಶೆಣೈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ತಮ್ಮ ಬಾಲ್ಯದ ದಿನಗಳು ಬಹಳ ಕಷ್ಟದಾಯಕವಾಗಿದ್ದವು .ಆ ಕಷ್ಟಗಳೇ ಇಂದು ನನಗೆ ಏನನ್ನಾದರೂ ಸಾಧಿಸುವ ಪ್ರೇರಣೆಯನ್ನು ನೀಡಿತು. ವಿದ್ಯಾರ್ಥಿ ಜೀವನದಲ್ಲಿ ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಶಿಕ್ಷಣ ಮುಗಿಯುವವರೆಗಿನ ಸುಮಾರು ಹದಿನೈದು- ಹದಿನಾರು ವರ್ಷಗಳ ಕಾಲ ಕಷ್ಟ ಪಟ್ಟರೆ ದೀರ್ಘಕಾಲದ ಜೀವನದಲ್ಲಿ ಸುಖ ಹಾಗೂ ಸಂತೋಷದಿಂದ ಬಾಳಬಹುದಾಗಿದೆ.ಇಂದಿನ ಕಾಲಘಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಬಹಳ ಮುಖ್ಯ. ಅದನ್ನು ಮನಗಂಡು ಈ ಸಾಫ್ಟ್ ವೇರ್ ಅನ್ನು ಅಭಿವೃದ್ಧಿಪಡಿಸಿದ್ದು , ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆಯಬೇಕು ಎಂದರು.
ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿ , ವಿದ್ಯಾರ್ಥಿಗಳು ಉನ್ನತ ಸಾಧನೆಗಾಗಿ ನಮ್ಮನ್ನು ನಂಬಿ ಈ ಸಂಸ್ಥೆಗೆ ಬಂದಿದ್ದಾರೆ. ಎಷ್ಟು ಸಾಧ್ಯವೋ ಅಷ್ಟು ಸೌಕರ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡುವುದಕ್ಕೆ ಆಡಳಿತ ಮಂಡಳಿ ಸದಾ ಸಿದ್ಧವಾಗಿರುತ್ತದೆ .ಅದನ್ನು ಬಳಸಿಕೊಂಡು ವಿದ್ಯಾರ್ಥಿಗಳು ಸಾಧನೆಯನ್ನ ಮಾಡಬೇಕು ಎಂದರು.
ಪ್ರಾಂಶುಪಾಲ ಅಮರೇಶ್ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಮೃತ ಭಾರತಿ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷ ಸತೀಶ್ ಪೈ , ಅಮೃತ ಭಾರತಿ ಟ್ರಸ್ಟ್ ನ ಕಾರ್ಯದರ್ಶಿ ಗುರುದಾಸ್ ಶೆಣೈ, ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಉಪನ್ಯಾಸಕ ಸುಹಾಸ್ ಶೆಟ್ಟಿ ನಿರೂಪಿಸಿ ವಂದಿಸಿದರು.