ಬೆಳಗಾವಿ :
ಬೆಳಗಾವಿಯ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮಕ್ಕೆ ಸ್ಥಳಾಂತರಗೊಂಡ ಹೊಸ ಪಶು ಚಿಕಿತ್ಸಾಲಯದ ಉದ್ಘಾಟನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಚೆಕ್ ವಿತರಣೆ ಸಮಾರಂಭ ಡಿಸೆಂಬರ್ 9 ರಂದು ಬೆಳಿಗ್ಗೆ 10 ಗಂಟೆಗೆ ಮುಚ್ಚಂಡಿಯ ಹನುಮಾನ ಚೌಕದಲ್ಲಿ ಜರುಗಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳಕರ ಆಗಮಿಸಲಿದ್ದಾರೆ. ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವ ಕೆ. ವೆಂಕಟೇಶ ಉದ್ಘಾಟಿಸಲಿದ್ದಾರೆ.

ಕರ್ನಾಟಕ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ನವದಹಲಿ ಪ್ರಕಾಶ್ ಬಾ. ಹುಕ್ಕೇರಿ ವಿಶೇಷ ಆಮಂತ್ರಿತರಿದ್ದಾರೆ.
ಪಶು ಸಂಗೋಪನಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಮ್, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ್, ಪೊಲೀಸ್ ಮಹಾನಿರೀಕ್ಷಕ ವಿಕಾಶ್ ಕುಮಾರ್ ವಿಕಾಶ್, ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ, ಪೊಲೀಸ್ ಆಯುಕ್ತ ಎಸ್.ಎನ್. ಸಿದ್ದರಾಮಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಎಸ್. ಗುಳೇದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ನಿರ್ದೇಶಕ ಮಂಜುನಾಥ ಎಸ್. ಪಾಳೇಗಾರ, ಜಂಟಿ ನಿರ್ದೇಶಕ ಡಾ. ಬಿ. ಎಲ್. ಪರಮೇಶ್ವರ ನಾಯಕ, ಉಪ ನಿರ್ದೇಶಕ ಡಾ. ರಾಜು ಕೂಲೇರ, ಮುಖ್ಯ ಪಶು ವೈದ್ಯಾಧಿಕಾರಿ ಡಾ. ಆನಂದ್ ಪಾಟೀಲ ಹಾಗೂ ಮತ್ತಿತರರು ಉಪಸ್ಥಿತರಿರಲಿದ್ದಾರೆ.