ಶೇಡಿಮನೆ : ಹಾಲಿಮಕ್ಕಿಯಲ್ಲಿ ನಿತೀಶ್ ಮೆಮೋರಿಯಲ್  ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಿಸಿದ ನಿತೀಶ್ ನಾರಾಯಣ ಸ್ಮಾರಕ ಮಂಟಪದ ಉದ್ಘಾಟನೆ, ಶೇಡಿಮನೆ ನಾರಾಯಣ ಮಾಸ್ಟರ್ ಸಾಧಕ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮವನ್ನು ಜ 14 ನೇ ಮಂಗಳವಾರ ಬೆಳಗ್ಗೆ ಗಂ.10.30 ಕ್ಕೆ ನಿತೀಶ್ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಚೆನ್ನ ಪೂಜಾರಿ ಅಧ್ಯಕ್ಷತೆಯಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಉದ್ಘಾಟಿಸಲಿದ್ದಾರೆ.

ಕಮಲಶಿಲೆ ಶ್ರೀಬ್ರಾಹ್ಮೀ ದುರ್ಗಾಪರಮೇಶ್ವರೀ ದೇವಳದ
ಅನುವಂಶಿಕ ಆಡಳಿತ ಮೊಕ್ತೇಸರ ಎಸ್.ಸಚ್ಚಿದಾನಂದ ಚಾತ್ರ, ಹೆಬ್ರಿ ಎಸ್‌.ಆರ್. ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ನಾಗರಾಜ ಶೆಟ್ಟಿ, ನಿವೃತ್ತ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ಕುಂದಾಪುರ ಬಿಲ್ಲವ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ,
ಮಡಾಮಕ್ಕಿ ಗ್ರಾಮ ಪಂಚಾಯಿತಿ ಅಧ್ಯಕ್ಷ
ಉದಯಕುಮಾರ್ ಶೆಟ್ಟಿ ಶೇಡಿಮನೆ, ನಿವೃತ್ತ ಮುಖ್ಯ ಶಿಕ್ಷಕ ವಾಸುದೇವ ಕ್ರಮಧಾರಿ ಅರಸಮ್ಮಕಾನು
ಭಾಗವಹಿಸಲಿದ್ದಾರೆ. ಮಡಾಮಕ್ಕಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಶೇಡಿಮನೆ ಇವರಿಗೆ ಸಾಧಕ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಟ್ರಸ್ಟ್ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.