Join The Telegram | Join The WhatsApp |
ಬೆಳಗಾವಿ :
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ವತಿಯಿಂದ ನಿರ್ಮಿಸಿರುವ ಬೆಳಗಾವಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಕಟ್ಟಡದ ಉದ್ಘಾಟನೆ ಡಿಸೆಂಬರ್ 28 ರಂದು ಬೆಳಗ್ಗೆ 9:30 ಕ್ಕೆ ಕ್ಯಾಂಪ್ ಪ್ರದೇಶದ ನೂತನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಸಚಿವರಾದ ಅರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ ಉಪಸ್ಥಿತರಿರುವರು. ಶಾಸಕ ಅನಿಲ್ ಬೆನಕೆ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
Join The Telegram | Join The WhatsApp |