ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರವನ್ನು ಸೆಪ್ಟೆಂಬರ್ 26 ರಿಂದ ಹಮ್ಮಿಕೊಂಡಿದೆ. ಅನಿರ್ದಿಷ್ಟ ಅವಧಿಗೆ ಕೆಲಸ ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುವುದು ಎಂದು ಸಂಘ ತಿಳಿಸಿದೆ.
ನಮಗೆ ಮೂಲಭೂತ ಸೌಕರ್ಯ ಒದಗಿಸಬೇಕು, ಸೇವಾ ಸೌಲಭ್ಯವನ್ನು ದೊರಕಿಸಿಕೊಡಬೇಕು ಮತ್ತು ಮೊಬೈಲ್ ಯಾಪ್ ಗಳಲ್ಲಿ ನಿರಂತರವಾಗಿ ಕೆಲಸ ಮಾಡುವಂತೆ ಹೇರಲಾಗುತ್ತಿರುವ ಒತ್ತಡವನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿ ಈ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಂಘ ಸ್ಪಷ್ಟಪಡಿಸಿದೆ.