ಬೆಳಗಾವಿ : ಭಾರತದ ಹಾಕಿ ತಂಡ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚು ಪದಕ ಗೆದ್ದ ನಿಮಿತ್ತ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾ ವಿದ್ಯಾಲಯದಲ್ಲಿ ಸಂಭ್ರಮಿಸಲಾಯಿತು. ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಂ. ಜಿ. ಹೆಗಡೆ ಅವರು ಹಾಕಿ ಮಾಂತ್ರಿಕ ಧ್ಯಾನ್ ಚಂದ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಮಹಾವಿದ್ಯಾಲಯದ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕೇಕ್ ಕತ್ತರಿಸುವ ಮೂಲಕ ವಿಶೇಷವಾಗಿ ಸಂಭ್ರಮಿಸಿದರು.ಮಹಾ ವಿದ್ಯಾಲಯದ ಹಾಕಿ ತರಬೇತುದಾರ ಡಾ. ಗಿರಿಜಾಶಂಕರ ಮಾನೆ ಹಾಗೂ ಮಹಾವಿದ್ಯಾಲಯದ ಬೋಧಕ ಬೋಧಕ ಸಿಬ್ಬಂದಿ ಉಪಸ್ಥಿತರಿದ್ದರು.