ರಾಂಚಿ:
ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತವರಿನಲ್ಲಿ ಭಾರತ ಸರಣಿಯನ್ನು ತನ್ನದಾಗಿಸಿಕೊಂಡಿದೆ. ರೋಹಿತ್ ಶರ್ಮಾ, ಶುಭಮನ್ ಗಿಲ್ ಜವಾಬ್ದಾರಿಯುತ ಅರ್ಧಶತಕ, ಧ್ರುವ್ ಜುರೆಲ್ ತಾಳ್ಮೆಯ ಬ್ಯಾಟಿಂಗ್ ನೆರವಿನಿಂದ ಭಾರತ, ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಹ್ಯಾಟ್ರಿಕ್ ಗೆಲುವಿನೊಂದಿಗೆ ಸರಣಿಯನ್ನು ಕೈವಶ ಮಾಡಿಕೊಂಡಿದೆ. 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3-1 ಅಂತರದಲ್ಲಿ ಭಾರತ ಮುನ್ನಡೆ ಸಾಧಿಸಿದೆ.

ಇಲ್ಲಿನ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆದ 4ನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 192 ರನ್‌ಗಳ ಗುರಿ ಪಡೆದ ಭಾರತ 61 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 192 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿದೆ. 40 ರನ್‌ಗಳಿಂದ 4ನೇ ದಿನದ ಕ್ರೀಸ್ ಆರಂಭಿಸಿದ ಭಾರತ, ಆಂಗ್ಲರ ಸ್ಪಿನ್ ದಾಳಿಯ ನಡುವೆಯೂ ಗೆಲುವು ಸಾಧಿಸಿದೆ. ಈ ಮೂಲಕ ಭಾರತವು ತವರಿನಲ್ಲಿ ನಡೆದ ಸತತ 17 ಟೆಸ್ಟ್ ಸರಣಿಗಳನ್ನು ಗೆದ್ದ ವಿಶೇಷ ಸಾಧನೆ ಮಾಡಿದಂತಾಗಿದೆ.