Join The Telegram | Join The WhatsApp |
ತಿರುವನಂತಪುರ-
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯವನ್ನು ಭಾರತ ತಂಡ ಕೇರಳದ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಎದುರಿಸಲಿದೆ.
ಈಗಾಗಲೇ ಗುವಾಹಟಿ ಮತ್ತು ಕೋಲ್ಕತ್ತಾದಲ್ಲಿ ನಡೆದ ಮೊದಲೆರಡು ಏಕದಿನ ಪಂದ್ಯಗಳನ್ನು ಕ್ರಮವಾಗಿ 67 ರನ್ ಮತ್ತು 4 ವಿಕೆಟ್‌ಗಳ ಅಂತರದಲ್ಲಿ ಗೆಲ್ಲುವ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಭಾರತ 2-0 ಅಂತರದಲ್ಲಿ ಸರಣಿಯನ್ನು ವಶಪಡಿಸಿಕೊಂಡಿದ್ದು, ಮೂರನೇ ಪಂದ್ಯ ಔಪಚಾರಿಕವೆನಿಸಿದೆ.
ಶ್ರೀಲಂಕಾ ವಿರುದ್ಧ ರೋಹಿತ್ ಶರ್ಮಾ ಪಡೆ ಇಲ್ಲಿಯವರೆಗೆ ಉತ್ತಮ ಪ್ರದರ್ಶನ ನೀಡಿದ್ದು, ಕೊನೆಯ ಪಂದ್ಯದ ಆಡುವ 11ರ ಬಳಗದಲ್ಲಿ ಕೆಲವು ಬದಲಾವಣೆ ಮಾಡಲಿದೆ. ಕಳೆದೆರಡು ಪಂದ್ಯದಲ್ಲಿ ಬೆಂಚ್ ಕಾಯಿಸಿದವರನ್ನು ಆಡಿಸಬಹುದು. ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಅರ್ಶ್‌ದೀಪ್ ಸಿಂಗ್ ಅವರಂತಹ ಯುವ ಆಟಗಾರರು ಅವಕಾಶ ಪಡೆಯಲಿದ್ದಾರೆ.
3ನೇ ಪಂದ್ಯದ ಸಮಯ: ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಪ್ರಾರಂಭ
Join The Telegram | Join The WhatsApp |