Join The Telegram | Join The WhatsApp |
ಪುಣೆ-
ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಇಂದು ನಡೆಯಲಿದೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದು ಮೂರು ಪಂದ್ಯಗಳ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಇದೀಗ ಎರಡನೇ ಪಂದ್ಯಕ್ಕಾಗಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಸಜ್ಜಾಗಿವೆ.
ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ಹಲವು ಆಟಗಾರರು ವಿಫಲವಾಗಿದ್ದರು. ಅದರಲ್ಲೂ ಅಗ್ರ ಕ್ರಮಾಂಕದ ಮೇಲಿದ್ದ ನಿರೀಕ್ಷೆ ಹುಸಿಯಾಗಿತ್ತು. ಹೀಗಾಗಿ ಎರಡನೇ ಪಂದ್ಯದಲ್ಲಿ ಹಿಂದಿನ ಪಂದ್ಯದಲ್ಲಿ ಮಾಡಿದ ತಪ್ಪನ್ನು ತಿದ್ದುಕೊಂಡು ಕಣಕ್ಕಿಳಿಯಲು ಸಜ್ಜಾಗಿದೆ. ಹೀಗಾಗಿ ಆರಂಭಿಕ ಆಟಗಾರ ಶುಬ್ಮನ್ ಗಿಲ್ ಹಾಗೂ ಇಶಾನ್ ಕಿಶನ್ ಪುಣೆಯಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ. ಇನ್ನು ಬೌಲಿಂಗ್‌ನಲ್ಲಿ ಯುಜುವೇಂದ್ರ ಚಾಹಲ್ ನೀರಸ ಪ್ರದರ್ಶನ ನೀಡಿದ್ದರು. ಪುಣೆಯಲ್ಲಿ ಅವರಿಗೂ ಮತ್ತೊಂದು ಅವಕಾಶ ದೊರೆಯಲಿದೆ.
ಸಂಜು ಸ್ಯಾಮ್ಸನ್ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಅಂತಿಮ ಎರಡು ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಮೊಣಕಾಲಿನ ಗಾಯದಿಂದಾಗಿ ಸಂಜು ಉಳಿದ ಎರಡು ಪಂದ್ಯಗಳಿಗೆ ಅಲಭ್ತವಾಗಲಿದ್ದಾರೆ ಎಂಬುದನ್ನು ಬಿಸಿಸಿಐ ಖಚಿತಪಡಿಸಿದ್ದು ಜಿತೇಶ್ ಶರ್ಮಾ ಭಾರತ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಇನ್ನು ಸಂಜು ಸ್ಯಾಮ್ಸನ್ ಅಲಭ್ಯವಾಗಿರುವ ಕಾರಣ ಋತುರಾಜ್ ಗಾಯಕ್ವಾಡ್‌ಗೆ ಅವಕಾಶ ದೊರೆಯುವ ಸಾಧ್ಯತೆ ಹೆಚ್ಚಿದೆ.
ಪಂದ್ಯದ ಸಮಯ- ಸಾಯಂಕಾಲ 7 ಗಂಟೆ
Join The Telegram | Join The WhatsApp |