Join The Telegram | Join The WhatsApp |
ಕ್ರೈಸ್ಟ್‌ಚರ್ಚ್-
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಕ್ರೈಸ್ಟ್‌ಚರ್ಚ್ ಅಂತಿಮ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಈ ಮೂಲಕ ಸರಣಿಯನ್ನು 1-0 ಅಂತರದಲ್ಲಿ ಗೆದ್ದುಕೊಂಡಿತು. ಭಾರತದ ವಿರುದ್ಧ 220 ರನ್‌ಗಳ ಬೆನ್ನತ್ತಿದ್ದ ನ್ಯೂಜಿಲೆಂಡ್ 18 ಓವರ್‌ಗಳಲ್ಲಿ 1 ವಿಕೆಟ್‌ಗೆ 104 ರನ್ ಗಳಿಸಿದ್ದಾಗ ಮಳೆಯು ಆಟಕ್ಕೆ ಅಡ್ಡಿಪಡಿಸಿತು, ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು. ಫಿನ್ ಅಲೆನ್ 57 ರನ್ ಗಳಿಸಿದರು.
ಇದಕ್ಕೂ ಮೊದಲು, ವಾಷಿಂಗ್ಟನ್ ಸುಂದರ್ ತಮ್ಮ ಚೊಚ್ಚಲ ODI ಅರ್ಧಶತಕವನ್ನು ಬಾರಿಸಿದರು ಆದರೆ ನ್ಯೂಜಿಲೆಂಡ್ ಇನ್ನೂ ಭಾರತವನ್ನು 219 ರನ್‌ಗಳಿಗೆ ಕಟ್ಟಿಹಾಕಿತು. ಆಡಮ್ ಮಿಲ್ನೆ ಮತ್ತು ಡೆರಿಲ್ ಮಿಚೆಲ್ ತಲಾ ಮೂರು ವಿಕೆಟ್ ಪಡೆದರು. ಭಾರತ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು.
ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಉತ್ತಮ ಆರಂಭವನ್ನು ಪಡೆಯುವಲ್ಲಿ ವಿಫಲವಾಯಿತು. ಶುಬ್ಮನ್ ಹಿಲ್ ಈ ಪಂದ್ಯದಲ್ಲಿ ಕೇವಲ 13 ರನ್‌ಗಳಿಗೆ ವಿಕೆಟ್ ಕಳೆದುಕೊಳ್ಳುವ ಮೂಲಕ ನಿರಾಸೆ ಅನುಭವಿಸಿತು. ಬಳಿಕ ಶಿಖರ್ ಧವನ್ ಕೂಡ 28 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಇನ್ನು ಸತತವಾಗಿ ಕಳಪೆ ಪ್ರದರ್ಶನ ನೀಡುತ್ತಿರುವ ರಿಷಭ್ ಪಂತ್ ಈ ಪಂದ್ಯದಲ್ಲಿಯೂ ಅದನ್ನು ಮುಂದುವರಿಸಿದ್ದು ಕೇವಲ 10 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಇನ್ನು ಅದ್ಭುತ ಲಯದಲ್ಲಿರುವ ಸೂರ್ಯಕುಮಾರ್ ಯಾದವ್ ಕೂಡ ಈ ಪಂದ್ಯದಲ್ಲಿ ಮಿಂಚಲು ವಿಫಲವಾಗಿದ್ದು ತಂಡಕ್ಕೆ ದೊಡ್ಡ ಹೊನ್ನಡೆಯುಂಟು ಮಾಡಿತು. ಸೂರ್ಯ ಈ ಪಂದ್ಯದಲ್ಲಿ ಕೇವಲ 6 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು.
ಟಾಮ್ ಲ್ಯಾಥಮ್- ಸರಣಿ ಶ್ರೇಷ್ಠ ಆಟಗಾರ
Join The Telegram | Join The WhatsApp |