ದುಬೈ :
ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ  ಟೆಸ್ಟ್ ಪಂದ್ಯ ಗೆದ್ದ ಬಳಿಕ ಭಾರತ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಯ ಮೊದಲ ಪಂದ್ಯ ಸೋತಾಗ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಿಂದ 6ನೇ ಸ್ಥಾನಕ್ಕೆ ಕುಸಿದ್ದ ಭಾರತ, ಇದೀಗ ದ್ವಿತೀಯ ಪಂದ್ಯದಲ್ಲಿ ಗೆಲುವು ಸಾಧಿಸಿ 6ನೇ ಸ್ಥಾನದಿಂದ ಮತ್ತೆ ಅಗ್ರಸ್ಥಾನಕ್ಕೆ ಜಿಗಿದಿದೆ. ಅಗ್ರಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾ ದ್ವಿತೀಯ ಸ್ಥಾನಕ್ಕೆ ಜಾರಿದೆ.

​ಭಾರತ ತಂಡ ಸದ್ಯ ಈ ಗೆಲುವಿನಿಂದಾಗಿ ಆಡಿದ ಮೂರು ಟೆಸ್ಟ್​ಗಳಲ್ಲಿ ಒಂದು ಸೋಲು 2 ಗೆಲುವು ಮತ್ತು 1 ಡ್ರಾ ಸಾಧಿಸಿ ಶೇ. 54.16 ಗೆಲುವಿನ ಪ್ರತಿಶತದೊಂದಿಗೆ ಅಗ್ರಸ್ಥಾನ ಪಡೆದಿದೆ. ಶೇ. 50 ಗೆಲುವಿನ ಪ್ರತಿಶತ ಸಾಧಿಸಿರುವ ದಕ್ಷಿಣ ಆಫ್ರಿಕಾ ದ್ವಿತೀಯ ಸ್ಥಾನದಲ್ಲಿದೆ. ಮೊದಲ ಪಂದ್ಯದಲ್ಲಿ ನಿಗದಿತ ಅವಧಿಯೊಳಗೆ ಓವರ್​ ಪೂರ್ಣಗೊಳಿಸಿದ ಕಾರಣಕ್ಕೆ ಭಾರತ ತಂಡಕ್ಕೆ ಐಸಿಸಿ ದಂಡ ವಿಧಿಸಿತ್ತು. ಈ ಪರಿಣಾಮ -2 ಫೆನಾಲ್ಟಿ ಅಂಕವೂ ಭಾರತಕ್ಕೆ ಸಿಕ್ಕಿದೆ.