ಮುಂಬೈ : ಭಾರತವು 2025 ರ ಪುರುಷರ ಏಷ್ಯಾಕಪ್ ಕ್ರಿಕೆಟ್ ನ್ನು ಆಯೋಜಿಸುವ ಹಕ್ಕು ಪಡೆದಿದೆ. ಟಿ 20 ಕ್ರಿಕೆಟ್ ಪಂದ್ಯಾವಳಿ ಇದಾಗಿದೆ.

2025ರ ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನ ಆತಿಥ್ಯ ವಹಿಸುತ್ತಿದ್ದರೆ, ಮುಂದಿನ ವರ್ಷ ನಡೆಯಲ್ಲಿರುವ ಏಷ್ಯಾಕಪ್‌ಗೆ ಭಾರತ ಆತಿಥ್ಯ ವಹಿಸುತ್ತಿದೆ.

ಚಾಂಪಿಯನ್ಸ್ ಟ್ರೋಫಿಗೆ ಪಾಲ್ಗೊಳ್ಳಲು ಟೀಂ ಇಂಡಿಯಾ ಪಾಕಿಸ್ತಾನಕ್ಕೆ ತೆರಳಲಿದೆಯೇ ಅಥವಾ ಇಲ್ಲವೇ ಎಂಬುದು ಭಾರಿ ಚರ್ಚೆ ಹುಟ್ಟುಹಾಕಿದೆ. ಒಂದೆಡೆ ಪಾಕಿಸ್ತಾನ ಕ್ರಿಕಟ್ ಮಂಡಳಿ, ನಾವು ಏಕದಿನ ವಿಶ್ವಕಪ್ ಆಡಲು ಭಾರತಕ್ಕೆ ನಮ್ಮ ತಂಡವನ್ನು ಕಳುಹಿಸಿದ್ದೇವು. ಹೀಗಾಗಿ ಇದೀಗ ಚಾಂಪಿಯನ್ಸ್ ಟ್ರೋಫಿ ಆಡಲು ಬಿಸಿಸಿಐ, ತನ್ನ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂಬ ವಾದ ಮುಂದಿಟ್ಟಿದೆ. ಆದರೆ ಈ ನಿರ್ಧಾರವನ್ನು ಭಾರತ ಸರ್ಕಾರದ ಹೆಗಲಿಗೆ ಬಿಸಿಸಿಐ ಹೊರಿಸಿದೆ.

ಇದೆಲ್ಲದರ ಮುಂದಿನ ವರ್ಷ ಪಾಕಿಸ್ತಾನ ಕ್ರಿಕೆಟ್ ತಂಡ ಭಾರತ ಪ್ರವಾಸ ಕೈಗೊಳ್ಳಬಹುದು ಎಂದು ಹೇಳಲಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ಮುಂದಿನ ವರ್ಷ ನಡೆಯಲ್ಲಿರುವ ಏಷ್ಯಾಕಪ್‌ಗೆ ಭಾರತ ಆತಿಥ್ಯ ವಹಿಸುತ್ತಿರುವುದು.