ವಿಶಾಖಪಟ್ಟಣ :
ಪ್ರವಾಸಿ ಇಂಗ್ಲೆಂಡ್ ವಿರುದ್ಧ ಭಾರತ ಜಯಭೇರಿ ಗಳಿಸಿದೆ.
ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 106 ರನ್‌ಗಳ ಗೆಲುವು ಸಾಧಿಸಿದೆ. 399 ರನ್‌ಗಳ ಗುರಿಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 292 ರನ್‌ಗೆ ಆಲೌಟ್ ಆಗಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಎರಡು ತಂಡಗಳು ತಲಾ 1-1 ಪಂದ್ಯ ಗೆದ್ದು ಸಮಬಲ ಸಾಧಿಸಿವೆ. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 396 ಹಾಗೂ ಇಂಗ್ಲೆಂಡ್ 253 ರನ್‌ಗೆ ಆಲೌಟ್ ಆಗಿತ್ತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತ 255 ರನ್‌ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತ್ತು.