Join The Telegram | Join The WhatsApp |
ಕೋಲ್ಕತ್ತಾ-
ಭಾರತ ಹಾಗೂ ಶ್ರೀಲಂಕಾ ನಡುವಿನ ಏಕದಿನ ಸರಣಿಯ ಕೋಲ್ಕತ್ತಾದ ಈಡನ್ ಗಾರ್ಡನ್ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲಿಂಗ್ ವಿಭಾಗ ಅದ್ಭುತ ಪ್ರದರ್ಶನ ನೀಡುವ ಮೂಲಕ ಇನ್ನು ಒಂದು ಪಂದ್ಯ ಬಾಕಿ ಇರುವಂತೆ 4 ವಿಕೆಟ್ ಗಳ ಜಯವನ್ನು ದಾಖಲಿಸಿ ಸರಣಿ ಜಯಿಸಿತು.
ಟಾಸ್ ಸೋತು ಮೊದಲಿಗೆ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಟೀಮ್ ಇಂಡಿಯಾ ಪರವಾಗಿ ಕುಲ್‌ದೀಪ್ ಯಾದವ್, ಮೊಹಮ್ಮದ್ ಸಿರಾಜ್ ಭರ್ಜರಿ ಬೌಲಿಂಗ್ ದಾಳಿ ನಡೆಸಿದ್ದು ಶ್ರೀಲಂಕಾ ತಂಡವನ್ನು 215 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ.
ಬ್ಯಾಟಿಂಗ್ ಆರಂಭಿಸಿದ ಭಾರತ ಆರಂಭಿಕ ಅಘಾತ ಅನುಭವಿಸಿತು. ನಂತರ ಕೆಎಲ್ ರಾಹುಲ್ -ಹಾರ್ದಿಕ್ ಪಾಂಡ್ಯ 75 ರನ್ ಗಳ ಜೊತೆಯಾಟ ನೆರವಿನಿಂದ ಗೆಲುವು ದಾಖಲಿಸಲು ಸಹಾಯ ಮಾಡಿತು. ರಾಹುಲ್ ಅವರು ಅಜೇಯ 64 ರನ್ ಗಳಿಸಿದರು.
ಸಂಕ್ಷಿಪ್ತ ಸ್ಕೋರ್ ವಿವರ-
ಶ್ರೀಲಂಕಾ 39.4 ಓವರ್ ಗಳಲ್ಲಿ 215 ರನ್ ಗಳಿಗೆ ಅಲೌಟ್
ಭಾರತ 43.2 ಓವರುಗಳಲ್ಲಿ 6 ವಿಕೆಟ್ ಕಳೆದುಕೊಂಡು 219 ರನ್
ಮುಂದಿನ ಪಂದ್ಯ-15 ಜನೇವರಿ
Join The Telegram | Join The WhatsApp |